March 23, 2026

ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪಾಳು ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

0
image_editor_output_image-367004512-1713728231730.jpg

ಕೊಪ್ಪಳ: ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕಿ ಇಂದು ಪಾಳು ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದೆ.

ಅನುಶ್ರೀ ಮಡಿವಾಳರ್(7) ಶವವಾಗಿ ಪತ್ತೆಯಾದ ಬಾಲಕಿ. ಏ.19ರಂದು ರಂದು ಮಧ್ಯಾಹ್ನ ಆಟವಾಡುವುದಾಗಿ ಮನೆಯಿಂದ ಹೊರಹೋಗಿದ್ದ ಬಾಲಕಿ ವಾಪಸ್ ಮನೆಗೆ ಬಾರದೇ ನಿಗೂಢವಾಗಿ ಕಾಣೆಯಾಗಿದ್ದಳು.

ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಆತಂಕಕೊಂಡು ಸುತ್ತಮುತ್ತ ಎಲ್ಲ ಕಡೆ ಹುಡುಕಾಟ ನಡೆಸಿದ್ದ ಪೋಷಕರು. ಆದರೆ ಬಾಲಕಿ ಪತ್ತೆಯಾಗಿರಲಿಲ್ಲ. ಆದರೆ ಇಂದು ಪಾಳು ಮನೆಯೊಂದರಲ್ಲಿ ಅನುಮಾನಸ್ಪಾದವಾಗಿ ಕೊಳೆತ ಸ್ಥಿತಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!