March 23, 2026

ರಾಹುಲ್ ಗಾಂಧಿ ಸ್ಪರ್ಧಿಸಲಿರುವ ವಯನಾಡ್ ಕ್ಷೇತ್ರದ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

0
image_editor_output_image1128993262-1713728519736.jpg

ತಿರುವನಂತಪುರಂ: ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಕೇರಳದ ವಯನಾಡ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.

ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದು ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ.

ಕಲ್ಪೆಟ್ಟಾದಲ್ಲಿರುವ ಚುನಾವಣಾ ಸಮಿತಿ ಕಚೇರಿಗೆ ತೆರಳಿ ಮಾತನಾಡಿದ ಸುಧಾಕರನ್, “ಲೋಕಸಭೆ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಯಾರ ಕೈಗೂ ಸಿಗುವುದಿಲ್ಲ, ಸಾಮಾನ್ಯ ಜನರಿಗೆ ಸಿಗುವುದಿಲ್ಲ” ಎಂದು ಆರೋಪಿಸಿದರು

Leave a Reply

Your email address will not be published. Required fields are marked *

error: Content is protected !!