February 4, 2026

ರಸ್ತೆ ಅಪಘಾತವಾಗಿ ಕಾರಿಗೆ ಬೆಂಕಿ: ಯುವತಿ ಸಜೀವ ದಹನ

0
image_editor_output_image1189377440-1713773013481.jpg

ಬೆಂಗಳೂರು: ನೆಲಮಂಗಲದ ಮಾದಾವರ ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ.

ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿ‌ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ.

ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!