February 4, 2026

ವಿಟ್ಲ: ಕೊಳವೆ ಬಾವಿಗೆ ಪಂಪ್ ಅಳವಡಿಸಿದ ಪ.ಪಂಚಾಯತ್: ಮಾಧ್ಯಮಗಳ ವರದಿಗೆ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು

0
image_editor_output_image-1388316950-1713787913325

ವಿಟ್ಲ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂತೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮತದಾನ ಬಹಿಷ್ಕಾರಕ್ಕೆ ಸಿದ್ಧವಾಗಿದ್ದರು. ಈ ಬಗ್ಗೆ ಪ್ರತಿದಿನ ಮಾಧ್ಯಮ ಸೇರಿದಂತೆ ಹಲವು ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು.

ಪ್ರತಿದಿನ ಸೇರಿದಂತೆ ಮೊದಲಾದ ಮಾಧ್ಯಮ ವರದಿ ಭಿತ್ತರಿಸಿದ ಕೆಲವೇ ಹೊತ್ತಿನಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕೊಳವೆ ಬಾವಿಗಳಿಗೆ ಪಂಪ್‌ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕೊಳವೆ ಬಾವಿಗಳ ದುರಸ್ಥಿ ಕಾಮಗಾರಿ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಅಧಿಕಾರಿಗಳಿಗೆ ಕರೆ ಮಾಡಿ ನೀರಿನ ಸಮಸ್ಯೆ ಸರಿಪಡಿಸುವಂತೆ ಸೂಚನೆ ಕೂಡಾ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!