ರಾಜ್ಯ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ BJP ಪಕ್ಷದಿಂದ ಉಚ್ಛಾಟನೆ
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದರಿಂದಾಗಿ ಮುಂದಿನ ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಬಿವೈ ರಾಘವೇಂದ್ರ ಹಾಗೂ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗೆ ಎದುರಾಳಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡಲಿದ್ದಾರೆ.




