May 6, 2026

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

0
image_editor_output_image708847681-1713941188445.jpg

ಯಾದಗಿರಿ: ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಯಾದಗಿರಿ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.

ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ಬಾಲಕರು ಎಂದು ತಿಳಿದು ಬಂದಿದೆ. ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!