May 6, 2026

ಮಂಗಳೂರು: ಅತ್ತಾವರದ ಬಾಲಕಿ ಅಪಹರಿಸಿ ಅತ್ಯಾಚಾರ, ಅಪರಾಧಿಗೆ 10 ವರ್ಷ ಶಿಕ್ಷೆ

0
image_editor_output_image-1693968122-1713942498699.jpg

ಮಂಗಳೂರು: ನಗರದ ಅತ್ತಾವರದ ವಸತಿಗೃಹವೊಂದರ ಬಳಿಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2022ರ ಡಿ.13ರಂದು ಬಸವರಾಜ್‌ ಬಾಲಕಿಯನ್ನು ಪುಸಲಾಯಿಸಿ ಧರ್ಮಸ್ಥಳಕ್ಕೆ ಕರೆಯಿಸಿ ಅಲ್ಲಿಂದ ಬಸ್‌ನಲ್ಲಿ ಬಿಜಾಪುರಕ್ಕೆ ಕರೆದೊಯ್ದಿದ್ದ. ಅಲ್ಲಿಂದ ತಿರುಪತಿಗೆ ಕರೆದೊಯ್ದು ಡಾಬಾವೊಂದರಲ್ಲಿ ಕೆಲಸಕ್ಕೆ ಸೇರಿಸಿ ರೂಮ್‌ನಲ್ಲಿ ವಾಸವಿದ್ದ.

ಈ ಸಂದರ್ಭ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ್ದ. ನೊಂದ ಬಾಲಕಿ ಕಾಣೆಯಾದ ಬಗ್ಗೆ ಆಕೆಯ ಮಾವ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪೊಲೀಸರು ತನಿಖೆ ನಡೆಸಿ ನೊಂದ ಬಾಲಕಿ ಹಾಗೂ ಬಸವರಾಜ್‌ನನ್ನು ತಿರುಪತಿಯಿಂದ ಕರೆ ತಂದಿದ್ದರು. ತನಿಖೆ ನಡೆಸಿದ ಅಂದಿನ ಪೊಲೀಸ್‌ ನಿರೀಕ್ಷಕ ಲೋಕೇಶ್‌ ಎ.ಸಿ. ಅವರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್‌ಸಿ-2) ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಈ ಪ್ರಕರಣದಲ್ಲಿ ಅಭಿಯೋಜನೆ ಪರ 13 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!