March 17, 2026

ಪುತ್ತೂರು: ಖಾಸಗಿ ಬಸ್ಸಿನಲ್ಲಿ ಯುವತಿ ಜತೆ ಅನುಚಿತ ವರ್ತನೆ: ಆರೋಪಿ ಪೊಲೀಸ್ ವಶಕ್ಕೆ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದವರ ವಿರುದ್ಧ ಕಾನೂನು ಕ್ರಮದ  ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

0
first-information-report

ಪುತ್ತೂರು: ಖಾಸಗಿ ಬಸ್‌ ನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹ ಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಸಮೀಪದ ಫರಿಂಗಿಪೇಟೆಯಲ್ಲಿರುವ ತನ್ನ ಮನೆಗೆ ಖಾಸಗಿ ಬಸ್ಸೊಂದರಲ್ಲಿ ಬರುತ್ತಿದ್ದ ಯುವತಿಯೊಂದಿಗೆ ಬಸ್‌ ನಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬೆಳಗ್ಗಿನ ಜಾವ ಬಸ್ ಗುಂಡ್ಯ ತಲುಪಿದ್ದಂತೆ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದರಿಂದ ನೊಂದ ಯುವತಿ ಉಪ್ಪಿನಂಗಡಿ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಸಿದಂತೆ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ಲಾಭಕ್ಕಾಗಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಕಂಡುಬಂದಿದ್ದು ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಹಾಗೂ ಇಂತಹ ಸುಳ್ಳು ಸುದ್ದಿಗಳಿಂದ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!