ಬಹಿರಂಗ ಪ್ರಚಾರಕ್ಕೆ ತೆರೆ: ಇಂದು, ನಾಳೆ ಮದ್ಯ ಮಾರಾಟ ನಿಷೇಧ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಸಮರದ ಅಬ್ಬರ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಹೀಗಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಮುಖಂಡರು ಕ್ಷೇತ್ರ ಬಿಟ್ಟು ತೆರಳಲಿದ್ದಾರೆ. ಇದೇ 26ರಂದು ರಾಜ್ಯಾದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ (Voting) ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಅಭ್ಯರ್ಥಿಗಳು ಮಾತ್ರ ನಾಳೆ ಮನೆ ಮನೆ ಪ್ರಚಾರ ಮಾಡಬಹುದಾಗಿದೆ.
ಬೆಂಗಳೂರು ನಗರ ಪೊಲೀಸ್ ಇಲಾಖೆಯ ನಿರ್ದೇಶನದ ಪ್ರಕಾರ ಏಪ್ರಿಲ್ 24 ರ ಬುಧವಾರ ಸಂಜೆ 5 ರಿಂದ ಏಪ್ರಿಲ್ 26 ರ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ವರದಿಗಳು ತಿಳಿಸಿದೆ.





