ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದ ನಿತಿನ್ ಗಡ್ಕರಿ
ಮುಂಬೈ: ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ನಿತಿನ್ ಗಡ್ಕರಿ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ತಕ್ಷಣ ಗಡ್ಕರಿ ಅವರನ್ನು ಚಿಕಿತ್ಸೆಗಾಗಿ ಸಾಗಿಸಲಾಯಿತು. ಯವತ್ಮಾಲ್‌ನ ಚುನಾವಣಾ ಸಮಾವೇಶದಲ್ಲಿ ಜನಸಮೂಹವನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಗಡ್ಕರಿ ಅವರು ಇದ್ದಕ್ಕಿದ್ದಂತೆ ತಮ್ಮ ಭಾಷಣವನ್ನು ನಿಲ್ಲಿಸಿದರು.
ಈ ವೇಳೆ ಪ್ರಜ್ಞಾಹೀನರಾಗಿ ವೇದಿಕೆಯ ಮೇಲೆ ಕುಸಿದು ಬಿದ್ದರು. ಈ ವೇಳೆ ವೇದಿಕೆಯಲ್ಲಿದ್ದ ಬಿಜೆಪಿ ನಾಯಕರು ನಿತಿನ್ ಗಡ್ಕರಿ ಅವರನ್ನು ಹಿಡಿದುಕೊಂಡಿದ್ದಾರೆ. ತಕ್ಣವೇ ಅವರನ್ನು ವೈದ್ಯಕೀಯ ನೆರವು ನೀಡಲು ಆಸ್ಪತ್ರೆಗೆ ಸಾಗಿಸಿದರು.
ಈ ಹಂತದಲ್ಲಿ ನಿತಿನ್ ಗಡ್ಕರಿ ಅವರ ಮುಖದ ಮೇಲೆ ನೀರು ಚಿಮುಕಿಸುವ ಮೂಲಕ ಅವರನ್ನು ಎಚ್ಚಿರುವ ಪ್ರಯತ್ನವನ್ನೂ ಮಾಡಿದರು. ಬಳಿಕ ವೇದಿಕೆಯಲ್ಲಿದ್ದ ಜನರನ್ನು ಬದಿಗೆ ಸರಿಸಿ ಎತ್ತಿಕೊಂಡೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.





