December 15, 2025

ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ, ಕೊಳ್ಳೇಗಾಲ ಶಾಸಕ ಎಆರ್ ಕೃಷ್ಣಮೂರ್ತಿ ಪಾರು..!

0
image_editor_output_image1810741600-1714028387013

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ  ಪ್ರಯಾಣಿಸುತ್ತಿದ್ದ  ಕಾರಿನ ಟಯರ್ ಏಕಾಏಕಿ ಸ್ಪೋಟಗೊಂಡು ಪಲ್ಟಿಯಾದ  ಘಟನೆ  ಮೈಸೂರಿನ ಹೊರವಲಯದಲ್ಲಿ  ಬುಧವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ  ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್  ಆದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಬದಿ ಹಳ್ಳಕೆ ಇಳಿದು ನಿಂತಿದೆ.

ರಾತ್ರಿ 11:50ರ ಸಮಯವಾದ್ದರಿಂದ ಆ ಸಮಯದಲ್ಲಿ ಬೇರೆ ವಾಹನಗಳ ಓಡಾಟ ಕಡಿಮೆ ಇದ್ದುದರಿಂದ, ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!