ಲಾರಿ ಹಿಂಬದಿಗೆ ಬೊಲೆರೋ ಪಿಕ್ ಅಪ್ ಢಿಕ್ಕಿ: ಇಬ್ಬರು ಮೃತ್ಯು
ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ ಪಿಕ್ ಅಪ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ಪಿಕ್ ಅಪ್ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ. ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ನಡೆದಿದೆ.





