March 17, 2026

ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ: ಬೆಳಗ್ಗೆ 9 ಗಂಟೆಯವರೆಗೆ ಶೇ.9.21 ಮತದಾನ

0
image_editor_output_image1248633618-1714107612985.jpg

ಬೆಂಗಳೂರು: ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿದೆ.

ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% ಮತದಾನ ದಾಖಲಾಗಿದೆ.

ರಾಜ್ಯದ ಕೆಲವೆಡೆ ಎವಿಎಂ ದೋಷದಿಂದಾಗಿ ಕೆಲ ಸಮಸ್ಯೆಯಾಗಿತ್ತು. ನಂತರ ಇವಿಎಂ ದೋಷವನ್ನು ಸರಿಪಡಿಸಿದ್ದು ಈಗ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!