December 15, 2025

ವಿಟ್ಲ: ಮತದಾನದ ಯಂತ್ರದಲ್ಲಿ ತಾಂತ್ರಿಕ ದೋಷ: ಮತದಾನಕ್ಕೆ ಅಡಚಣೆ

0
image_editor_output_image47524905-1714107794444.jpg

ವಿಟ್ಲ: ತಾಲೂಕಿನ ಕರೋಪಾಡಿ ಎಂಬಲ್ಲಿ ಮತದಾನದ ಯಂತ್ರದಲ್ಲಿ ತಾಂತ್ರಿಕ ದೋಷಕಂಡುಬಂದಿದ್ದು, ಮತದಾನಕ್ಕೆ ಅಡಚಣೆಯಾಗಿರುವ ಬಗ್ಗೆ ವರದಿಯಾಗಿದೆ.

ಬೂತ್ ಸಂಖ್ಯೆ 240 ಪದ್ಯಾಣ ಕರೋಪಾಡಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇನ್ನೂ ಕೂಡ ಮತದಾನ ಪ್ರಕ್ರಿಯೆ ಆರಂಭಗೊಳ್ಳದೆ. ಮತದಾರರು ಸರತಿ ಸಾಲಿನಲ್ಲಿ ಕಾಯುವಂತಾಗಿದೆ ಎಂದು ತಿಳಿದು ಬಂದಿದೆ.

ಮತಯಂತ್ರದಲ್ಲಿರುವ ಒಂದು ಬಟನ್ ಕೆಲಸ ಮಾಡದ ಹಿನ್ನೆಲೆಯಲ್ಲಿ ಮತದಾನಕ್ಕೆ ಅಡ್ಡಿಯಾಗಿದ್ದು, ಮತಯಂತ್ರದ ರಿಪೇರಿ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!