ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ನಿವಾಸದ ಮೇಲೆ ಐಟಿ ದಾಳಿ
ಬೆಂಗಳೂರು: ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದ್ದು ಸುಧಾಕರ್ ಆಪ್ತ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ.
ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯ ಇಂಚಿಂಚು ಪರಿಶೀಲನೆ ನಡೆಸಿದ್ದು ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.





