ಪ್ರಾಂಶುಪಾಲ ಮತ್ತು ಒಂಭತ್ತು ಮಂದಿ ಶಿಕ್ಷಕರಿಂದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್
ಅಲ್ವಾರ್: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಒಂಬತ್ತು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆ ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ಆಕೆಯ ತಂದೆ ಕೇಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತೆ 10ನೇ ತರಗತಿಯಲ್ಲಿ ವಿದ್ಯಾರ್ಥಿಯಾಗಿದ್ದು, ಶಾಲೆಯ ಪ್ರಾಂಶುಪಾಲರು ಮತ್ತು ಇತರ ಮೂವರು ಶಿಕ್ಷಕರು ಒಂದು ವರ್ಷದಿಂದ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾಳೆ. ಇಬ್ಬರು ಮಹಿಳಾ ಶಿಕ್ಷಕರು ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಆಕೆ ಆರೋಪ ಮಾಡಿದ್ದಾಳೆ.
ಈ ಪ್ರಕರಣದ ಸಂಬಂಧ ಸರ್ಕಾರಿ ಶಾಲಾ ಪ್ರಾಂಶುಪಾಲ ಸೇರಿದಂತೆ 15 ಮಂದಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.




