February 3, 2026

ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಕುಸಿದುಬಿದ್ದು ಮೃತ್ಯು

0
image_editor_output_image1337434344-1714123718287.jpg

ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ರಾಜ್ಯದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಅಲ್ಲಲ್ಲಿ ಕೆಲವು ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಬಹುತೇಕ ಶಾಂತಿಯುತ ಮತದಾನವಾಗಿದೆ.

ಈ ನಡುವೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ.

ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು, ಆದರೆ ದಾರಿ ಮಧ್ಯದಲ್ಲೇ ಮೃತಪಟ್ಟರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!