September 26, 2026

ಪುತ್ತೂರು: ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕನ ವಿರುದ್ಧ ಪ್ರಕರಣ ದಾಖಲು

0
image_editor_output_image1572117659-1714141922757

ಪುತ್ತೂರು: ಮತಗಟ್ಟೆಗೆ ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿದ್ದಾನೆ. ಅಲ್ಲದೆ ಫೋಟೋ ಕ್ಲಿಕ್ಕಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


ರಂಜಿತ್ ಬಂಗೇರ ಎಂಬ ಯುವಕ ನಿಯಮ ಉಲ್ಲಂಘಿಸಿ ಪ್ರಕರಣ ದಾಖಲಿಸಿಕೊಂಡ ಯುವಕ. ಆತ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೋ ತೆಗೆದು ಪುತ್ತೂರಿನ ಕೋಟಿ-ಚೆನ್ನಯ ಕಂಬಳ ವಾಟ್ಸಾಪ್ ಗ್ರೂಪ್‌ಗೆ ಶೇರ್ ಮಾಡಿದ್ದಾನೆ.

 

ಈ ಫೋಟೊ ನೋಡಿದ ಯಾರೋ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಂಜಿತ್ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!