September 25, 2026

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ: ಕೇಂದ್ರ ಸರ್ಕಾರ ವಿರುದ್ಧದ ಹೋರಾಟಕ್ಕೆ ಜಯ

0
image_editor_output_image-1122531960-1714199430123.jpg

ನವದೆಹಲಿ: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ.

ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

 

ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿತ್ತು. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.

Leave a Reply

Your email address will not be published. Required fields are marked *

You may have missed

error: Content is protected !!