ಕಾಂಗ್ರೆಸ್ ಗೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಂ ಸಮುದಾಯದ ನಾಯಕತ್ವ ಬೇಡ: ಕಾಂಗ್ರೆಸ್ ಮುಖಂಡ ಆರಿಫ್ ನಸೀಮ್

ಕಾಂಗ್ರೆಸ್ ಗೆ ನಮ್ಮ ಮತ ಬೇಕು ಆದರೆ ಮುಸ್ಲಿಂ ಸಮುದಾಯದ ನಾಯಕತ್ವ ಬೇಡ ಎಂದು ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾ ಬಹಿರಂಗವಾಗಿ ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯಿಂದ ಕೆಳಗಿದ ನಂತರ ಮುಹಮ್ಮದ್ ಆರಿಫ್ ನಸೀಮ್ ಖಾ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ಮುಸ್ಲಿಂ ನಾಯಕರನ್ನು ಕಾಂಗ್ರೆಸ್ ಪಕ್ಷವು ಲೋಕಸಭೆಗೆ ನಾಮನಿರ್ದೇಶನ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಈ ವಿಚಾರ ಮುಸ್ಲಿಂ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಮುಹಮ್ಮದ್ ಆರಿಫ್ ನಸೀಮ್ ಖಾ ಅವರು, ಮಹಾ ವಿಕಾಸ್ ಅಘಾಡಿ (ಎಂವಿಎ) ಬಣವು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಬಣವು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.