ಹಾಸನ ಅಶ್ಲೀಲ ಪೆನ್ ಡ್ರೈವ್ ಪ್ರಕರಣ: ಎಚ್.ಡಿ. ರೇವಣ್ಣ ವಿರುದ್ಧವೂ FIR ದಾಖಲು
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬೆನ್ನಲ್ಲೇ ಅವರ ತಂದೆ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಇದೇ ಆರೋಪ ಕೇಳಿಬರುತ್ತಿದೆ. ತಂದೆ ಮತ್ತು ಮಗ ಇಬ್ಬರ ವಿರುದ್ಧವೂ ಇದೀಗ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಷ್ಟೇ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಎಫ್‌ಐಆರ್ ದಾಖಲಾಗಿತ್ತು. ಇದೀಗ ತಂದೆಯ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಎಚ್.ಡಿ. ರೇವಣ್ಣ ಮನೆಯಲ್ಲಿ ಕೆಲಸ ಮಾಡಿದ್ದ ಮಹಿಳೆಯಿಂದಲೇ ದೂರು ದಾಖಲಾಗಿದೆ. ಭವಾನಿ ರೇವಣ್ಣ ಇಲ್ಲದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. 3542, 3548, 506, 509 ಕ್ರಿಮಿನಲ್ ಕೇಸ್ ದಾಖಲಾಗಿದೆ.





