ದ.ಕ. ದಲ್ಲಿ 1.20 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಜಯಭೇರಿ: ಅಭ್ಯರ್ಥಿ ಪದ್ಮರಾಜ್ ವಿಶ್ವಾಸ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂದು ಅಭ್ಯರ್ಥಿ ಪದ್ಮರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಚುನಾವಣೆಯ ದಿನದಂದು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಮತದಾರರ ಉತ್ಸಾಹ, ಸ್ಪಂದನೆ ಕಂಡು ಆತ್ಮವಿಶ್ವಾಸ ಹೆಚ್ಚಿದೆ. ಮತದಾನ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕಿತ್ತು. ಆದರೆ ದ.ಕ. ಜಿಲ್ಲೆಯಲ್ಲಿ ಉತ್ತಮ ಮತದಾನ ಆಗಿದೆ. ಕಾರ್ಯಕರ್ತರ ಆಶಯ, ಮತದಾರರು ಬದಲಾವಣೆ ಬಯಸಿರುವುದು ಜೂ. 4ರಂದು ಫಲಿತಾಂಶದ ದಿನ ತಿಳಿಯಲಿದೆ ಎಂದವರು ಹೇಳಿದರು.





