May 16, 2024

ಉತ್ತರ ಪತ್ರಿಕೆಯಲ್ಲಿ ಜೈಶ್ರೀರಾಮ್ ಬರೆದ ವಿದ್ಯಾರ್ಥಿಗೆ ಪೂರ್ಣ ಅಂಕ: ಇಬ್ಬರು ಅಧ್ಯಾಪಕರ ಅಮಾನತು

0

ಲಕ್ಕೋ : ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಹಾಡುಗಳು, ಸಂಗೀತ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದಿರುವ ಉತ್ತರ ಪ್ರತಿಕೆಗಳಿಗೆ ಶಿಕ್ಷಕರು ಅಂಕ ನೀಡಿದ್ದು, ಇದೀಗ ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಚೌನ್‌ಪುರದ ವೀ‌ರ್ ಬಹದ್ದೂ‌ರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.

ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೆ 60% ಅಂಕವನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿ ಮುಖಂಡ ದಿವ್ಯಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಉತ್ತರ ಪ್ರತಿಕೆಯಲ್ಲಿ ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಕ್ರಿಕೆಟಿಗರ ಹೆಸರುಗಳು ಕೂಡ ಇದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!