May 17, 2024

ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ಯುವತಿ ಮೃತ್ಯು

0

ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಹೋದರಿಯ ಮೆಹಂದಿ ಕಾರ್ಯಕ್ರಮವಿತ್ತು. ಈ ವೇಳೆ ರಿಮ್ಶಾ ಮೃತಪಟ್ಟಿದ್ದಾಳೆ.

ಇದೀಗ ರಿಮ್ಶಾ ಡ್ಯಾನ್ಸ್ ಮಾಡುತ್ತಾ ಕುಸಿದು ಬೀಳುತ್ತಿರುವ‌ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.



Leave a Reply

Your email address will not be published. Required fields are marked *

error: Content is protected !!