ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಣೆ: ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆ ದೂರು
ಬೆಂಗಳೂರು: ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದಾರೆ.




