February 4, 2026

ಉಳ್ಳಾಲದ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image839090727-1714382869840.jpg

ಉಳ್ಳಾಲ: ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಎಂದು ಗುರುತಿಸಲಾಗಿದೆ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಇದೆ.

Leave a Reply

Your email address will not be published. Required fields are marked *

error: Content is protected !!