May 17, 2024

ಹಾಸನ‌ ಅಶ್ಲೀಲ ಪೆನ್ ಡ್ರೈವ್ ಪ್ರಕರಣ: ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆ ಮಹಿಳೆಯಿಂದ ದೂರು ದಾಖಲು

0

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ.

ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!