May 16, 2024

ಹಾಸನ: ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

0

ಬೆಂಗಳೂರು : ಹಾಸನದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಇಂದು (ಎ. 29) ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ” ಪ್ರಜ್ವಲ್‌ ರೇವ‍ಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಪ್ರ ಉಚ್ಚಾಟಿನೆ ಮಾಡಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಪ್ರಜ್ವಲ್‌ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜೆಡಿಎಸ್ ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟು ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!