ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ ಕಾರು ಪಲ್ಟಿ
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ ಕಾರು ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ಎರೆ ಕೆನಾಲ್ ಬಳಿ ಈ ಘಟನೆ ನಡೆದಿದೆ. ಈ ವೇಳೆ ಕಾರಿನಲ್ಲಿ ಬೈರತಿ ಬಸವರಾಜ್ ಇರಲಿಲ್ಲ.
ಅವರು ಬೇರೆಯವರ ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಆ ಕಾರನ್ನು ಹಿಂದೆ ಅಪಘಾತಕ್ಕೀಡಾದ ಕಾರು ಚಲಿಸುತ್ತಿತ್ತು. ಈ ವೇಳೆ ಕಾರು ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿ ಬಿದ್ದಿದೆ.




