ಪತಂಜಲಿಯ 14 ಉತ್ಪನ್ನಗಳ ಪರವಾನಿಗೆ ರದ್ದು

ಉತ್ತರಾಖಂಡ: ಪತಂಜಲಿಗೆ ಹೊಡೆತದ ಮೇಲೆ ಹೊಡೆತ ಬಿದ್ದಂತೆ ಕಾಣುತ್ತಿದೆ ಇತ್ತೀಚಿಗೆ ದಾರಿ ತಪ್ಪಿಸುವ ಜಾಹಿರಾತುಗಳನ್ನು ನೀಡಿ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಪತಂಜಲಿಗೆ ಇದೀಗ ಉತ್ತರಾಖಂಡ ಸರಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನು ರದ್ದುಗೊಳಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ.
ಉತ್ತರಾಖಂಡ ಸರ್ಕಾರವು ಸೋಮವಾರ ಏಪ್ರಿಲ್ 15 ರ ಆದೇಶದ ಮೂಲಕ ಪತಂಜಲಿಯ 14 ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಿದೆ. ಅಲ್ಲದೆ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ವಿರುದ್ಧ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಇಬ್ಬರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದೆ.