September 25, 2026

ಸಂಸದ ಪ್ರಜ್ವಲ್ ರೇವಣ್ಣ ‘ಅಶ್ಲೀಲ ವಿಡಿಯೋ’ ಪ್ರಕರಣ: ಕಾಂಗ್ರೆಸ್ ಇದುವರೆಗೆ ಯಾಕೆ ಕ್ರಮ ಕೈಗೊಂಡಿಲ್ಲ?: ಅಮಿತ್ ಶಾ

0
image_editor_output_image-1157674767-1714468875659.jpg

ಗುವಾಹಟಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ‘ಅಶ್ಲೀಲ ವಿಡಿಯೋ’ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಕಾಂಗ್ರೆಸ್ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ? ಎಂದು‌ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ಎಂದರು.

 

ನಾನು ಕಾಂಗ್ರೆಸ್ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.

ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!