ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದಕ್ಕೆ ಪುರಾವೆ ಏನು?: ಎಚ್.ಡಿ.ಕುಮಾರಸ್ವಾಮಿ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ಡಿಸಿಂ ಡಿಕೆ ಶಿವಕುಮಾರ್ ಇದ್ದಾರೆ, ಅವರನ್ನು ವಜಾಗೊಳಿಸಬೇಕು ಎಂದು ಎಚ್‌ಡಿ ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ.
ಜೆಡಿಎಸ್ ಕೋರ್ ಕಮಿಟಿ ಸಭೆ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಿಡಿಯೋದಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದಕ್ಕೆ ಪುರಾವೆ ಏನು? ಆದರೂ ನೈತಿಕತೆಯ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಕುಮಾರಸ್ವಾಮಿ ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಕರಣದ ತನಿಖೆಗೆ ಬಿಜೆಪಿ ಒಲವು ತೋರಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಬೇಕು ಎಂದು ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ.