March 22, 2026

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಬೆನ್ನಲ್ಲೇ ರೆಬಲ್ ನಾಯಕ ಈಶ್ವರಪ್ಪ ಪುತ್ರನಿಂದ ತಡೆಯಾಜ್ಞೆ..!

0
image_editor_output_image-2123438428-1714497261463

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಹೆಣ್ಣುಮಕ್ಕಳ ಜೊತೆ ನಡೆಸಿದ್ದ ಲೈಂಗಿಕ ಕ್ರಿಯೆಯ ವಿಡಿಯೊಗಳು ಬಹಿರಂಗಗೊಂಡು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಮಾಜಿ ಬಿಜೆಪಿ ನಾಯಕ , ಶಿವಮೊಗ್ಗದ ಬಂಡಾಯ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ಏಪ್ರಿಲ್‌ 27ರಂದು ತಮ್ಮ ಬಗ್ಗೆ ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ವರದಿಯಾಗಿದೆ.

ರಾಜಕೀಯ ಮುಖಂಡರ ಅಶ್ಲೀಲ ವಿಡಿಯೋಗಳು ಬಹಿರಂಗಗೊಳ್ಳುವುದು ಮತ್ತು ಬಹಿರಂಗಗೊಳ್ಳುವ ಸೂಚನೆ ಸಿಗುತ್ತಿದ್ದಂತೆ ಕೋರ್ಟಿನಿಂದ ತಡೆಯಾಜ್ಞೆ ತರುವುದು ಹೊಸ ಬೆಳವಣಿಗೆಯೇನಲ್ಲ. ಎಲ್ಲಾ ಪಕ್ಷದ ಹಲವು ನಾಯಕರು ತಡೆಯಾಜ್ಞೆ ತಂದಿದ್ದಾರೆ ಆದರೂ ಬಿಜೆಪಿಯ ಇಂತಹ ಬೆಳವಣಿಗೆಗಳು ಹೆಚ್ಚು ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!