September 25, 2026

ಕಡಬ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಗೆ ಮತ ಹಾಕುವಂತೆ ಉಲ್ಲೇಖ: ಪ್ರಕರಣ ದಾಖಲು

0
image_editor_output_image-192679447-1714539396500.jpg

ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.

ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

 

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!