ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ: 24 ಗಂಟೆಗಳಲ್ಲಿ ಹಾಜರಾಗಲು ಎಸ್ಐಟಿ ನೋಟಿಸ್
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಶಾಸಕ ಎಚ್‌ಡಿ ರೇವಣ್ಣ ಅವರಿಗೆ ಎಸ್‌ಐಟಿ (ವಿಶೇಷ ತನಿಖಾ ತಂಡ) ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೇ 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ.
ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು ಹಾಜರಾಗಿ ಹೇಳಿಕೆ ನೀಡಬೇಕಿದೆ. ಹೀಗಾಗಿ, ನೋಟೀಸ್ ತಲುಪಿದ 24 ಗಂಟೆಯ ಒಳಗೆ ಕಡ್ಡಾಯವಾಗಿ ಎಸ್‌ಐಟಿ ಮುಂದೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.





