ಮಲ್ಪೆ: ಸಮುದ್ರಪಾಲಾಗುತ್ತಿದ್ದ ಬಾಲಕನ ರಕ್ಷಣೆ
ಉಡುಪಿ: ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





