ಮನೆಗಳ್ಳತನ ಕೃತ್ಯಗಳಲ್ಲಿ ತೊಡಗಿದ್ದ ಆರೋಪಿಯ ಬಂಧನ
ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಕೃತ್ಯಗಳಲ್ಲಿ ತೊಡಗಿದ್ದ ಕಳ್ಳನೊಬ್ಬನನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕೋಟೆ ಗ್ರಾಮದ ಗಣೇಶ ಅಲಿಯಾಸ್ ಟಚ್ಚು ಬಂಧಿತನಾಗಿದ್ದು, ಆರೋಪಿಯಿಂದ 210 ಗ್ರಾಂ ಚಿನ್ನಾಭರಣ ಹಾಗೂ ಒಂದು ಕೇಜಿ ಬೆಳ್ಳಿ ವಸ್ತುಗಳು ಸೇರಿ ಒಟ್ಟು ₹13.35 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮುಖಂಡ ಪ್ರಭಾಕರ ರೆಡ್ಡಿ ಅವರ ಎರಡನೇ ಪತ್ನಿ ಪವಿತ್ರಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಕೃತ್ಯದ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.





