September 26, 2026

ಹಾಸನ: ಲೈಂಗಿಕ ಹಗರಣ: ಫೇಸ್ ಬುಕ್ ನಲ್ಲಿ ಪ್ರಥಮ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ: ಪ್ರಜ್ವಲ್ ಪ್ರಕರಣದ ಬಗ್ಗೆ ಹೇಳಿದ್ದೇನು?

0
image_editor_output_image1275920187-1714562105922

ಬೆಂಗಳೂರು : ಲೈಂಗಿಕ ಹಗರಣ ಪ್ರಕರಣದ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅ‍ಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಸಂಬಂಧ ಎಸ್‌ಐಟಿ ತನಿಖೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಪೋಸ್ಟ್‌ ಮಾಡಿದ್ದಾರೆ.

 

ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!