ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್
ಬೀದರ್: ‘ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ’ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.
ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ. ನಿರ್ಭಯಾ ಅತ್ಯಾಚಾರ, ವಿಕೃತಕಾಮಿ ಉಮೇಶ್ ರೆಡ್ಡಿ ಪ್ರಕರಣದ ಮಾದರಿಯಲ್ಲಿ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು ಎಂದು ಆಗ್ರಹಿಸಿದರು.
ತಾಯಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡುತ್ತೇನೆ ಎಂದು ಹೇಳಬೇಕಿತ್ತು. ಆದರೆ, ಅವರು ಹಾಗೇ ಮಾಡಿಲ್ಲ. ಅವರು ವಿಶ್ವಗುರು ಅಂತ ಅವರನ್ನು ಕರೆದುಕೊಳ್ಳುತ್ತಾರೆ. ಆದರೆ,
ಸಂತ್ರಸ್ತೆಯರ ಪರ ಮಾತನಾಡಿಲ್ಲ. ಅವರ ಜೊತೆ ನಾವಿದ್ದೇವೆ
ಎಂದು ಬಿಜೆಪಿ ಮುಖಂಡರಾದರೂ ಹೇಳಬೇಕಿತ್ತು ಎಂದರು.





