September 25, 2026

ಯುವಕನ ಮೇಲೆ ಲೈಂಗಿಕ ದೌರ್ಜನ್ಯ: ಬ್ರಹ್ಮಾವರ ಲಾಡ್ಜ್ ನಲ್ಲಿದ್ದ ವಾಸ್ತುತಜ್ಞನ ಬಂಧನ

0
image_editor_output_image-436306184-1714664797088

ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ.

ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್(51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ಕಳೆದ 12ವರ್ಷಗಳಿಂದ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ.

 

18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು. ಈ ಸಂದರ್ಭ ತಂದೆಯನ್ನು ಹೊರಗೆ ಕಳುಹಿಸಿದ ಅನಂತ ನಾಯ್ಕ್, ಬಳಿಕ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅಸ್ವಾಭಾವಿಕ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.

ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ನೇತೃತ್ವದ ತಂಡ ಆರೋಪಿ ಅನಂತ ನಾಯ್ಕ್‌ನನ್ನು ಇಂದು ಬೆಳಗ್ಗೆ ಬಂಧಿಸಿದೆ. ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

Leave a Reply

Your email address will not be published. Required fields are marked *

You may have missed

error: Content is protected !!