December 15, 2025

ಪಶ್ಚಿಮಬಂಗಾಳ: ರಾಜ್ಯಪಾಲರಿಂದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಆರೋಪ

0
image_editor_output_image2018212309-1714669576355

ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್, ಮಹಿಳೆಯೋರ್ವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿರುವುದಾಗಿ ‘ಝೀ ನ್ಯೂಸ್’ ವರದಿ ಮಾಡಿದೆ.

ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಇಂದು ರಾಜ್ಯಪಾಲರನ್ನು ಭೇಟಿ ಮಾಡಲು ಹೋದಾಗ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಕೋಲ್ಕತ್ತಾದ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಸಂಜೆ ಕಿರುಕುಳದ ಬಗ್ಗೆ ದೂರು ನೀಡಿರುವುದಾಗಿ ವರದಿಯಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳ ಭೇಟಿಯ ಹಿನ್ನೆಲೆಯಲ್ಲಿ ಇಂದು ರಾತ್ರಿ ರಾಜಭವನದಲ್ಲಿ ರಾತ್ರಿ ತಂಗಬೇಕಿತ್ತು. ಈ ನಡುವೆಯೇ ರಾಜ್ಯಪಾಲರು ತನಗೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಮಾಹಿತಿಯನ್ನು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಹಾಗೂ ಸಾಗರಿಕಾ ಘೋಷ್ ಕೂಡ ಹಂಚಿಕೊಂಡಿದ್ದು, “ಇದು ಆಘಾತಕಾರಿ ಮತ್ತು ಅವಮಾನಕರ” ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ಚರ್ಚೆಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿರುವು, ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದೆ.

Leave a Reply

Your email address will not be published. Required fields are marked *

error: Content is protected !!