ಮಡಿಕೇರಿ: ಅತ್ತೆಯನ್ನು ಕೊಲೆಗೈದ ಸೊಸೆಯ ಬಂಧನ
ಮಡಿಕೇರಿ: ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಅವರನ್ನು ಕೊಲೆಗೈದ ಸೊಸೆ ಬಿಂದು (26) ಬಂಧಿತ ಆರೋಪಿ.
ಮರಗೋಡಿನಲ್ಲಿ ಅತ್ತೆ ಪೂವಮ್ಮ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಪತಿ ಪ್ರಸನ್ನ, ಒಂದು ವರ್ಷದ ಪುತ್ರಿ ಜೊತೆಗೆ ಬಿಂದು ವಾಸವಾಗಿದ್ದು. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇತ್ತು. ಇಬ್ಬರ ನಡುವೆ ಕಲಹವೂ ಆಗಾಗ್ಗೆ ನಡೆಯುತ್ತಿತ್ತು ಎನ್ನಲಾಗಿದೆ.
ಏ.15 ರಂದು ಪತಿ ಮೌಲ್ಯಮಾಪನ ಕರ್ತವ್ಯಕ್ಕಾಗಿ ಮಡಿಕೇರಿಗೆ ತೆರಳಿದ್ದ ಸಂದರ್ಭ ಪೂವಮ್ಮ ಕುಸಿದು ಬಿದ್ದಿರುವುದಾಗಿ ಪತಿ ಪ್ರಸನ್ನ ಅವರಿಗೆ ಬೆಳಗ್ಗೆ ಬಿಂದು ಕರೆ ಮಾಡಿ ತಿಳಿಸಿದ್ದಾಳೆ.





