ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರು ಮೃತ್ಯು, 45ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್‌ನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟು, 45ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದೆ.
ಮೃತರನ್ನು ಚಿಕ್ಕಬಳ್ಳಾಪುರ ಗೌರಿಬಿದನೂರಿನ ನಿವಾಸಿಗಳಾದ ರುದ್ರೇಶ್ (38), ಲೋಕೇಶ್ (26) ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ ಗೌರಿಬಿದನೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಗೇರುಸೊಪ್ಪಾ ಸುಳೆಮುರ್ಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರಿಂದ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ತತ್ ಕ್ಷಣವೇ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರಾ ಗಂಭೀರ ಗಾಯಾಳುಗಳನ್ನು ಮಣಿಪಾಲ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 45ಕ್ಕೂ ಹೆಚ್ಚಿನ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.






