August 25, 2026

ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಯುವಕ ಮೃತ್ಯು

0
image_editor_output_image-2000629762-1714755679416


ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ (ಮೇ ೩) ಸಂಜೆ ಸಂಭವಿಸಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (೩೪) ಮೃತರು.

ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, ೧೦ ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!