July 3, 2026

ಉಡುಪಿ: ಮನಃಪೂರ್ವಕವಾಗಿ ಮತಾಂತರವಾದರೆ ನಮ್ಮ ಆಕ್ಷೇಪವಿಲ್ಲ: ಪೇಜಾವರ ಶ್ರೀ

0
IMG-20211209-WA0010.jpg

ಉಡುಪಿ: ಮಂಗಳೂರಿನಲ್ಲಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜಕ್ಕೂ ದುರಂತ. ಮತಾಂತರದ ಹಾವಳಿ ಇಡೀ ಮನೆಯನ್ನು ಬಲಿತೆಗೆದುಕೊಂಡಿದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥರಿಂದ ಹೇಳಿದ್ದಾರೆ.

ಮತಾಂತರದ ಶಂಕೆಯ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗು ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮನಃಪೂರ್ವಕವಾಗಿ ಯಾರಾದರೂ ಮತಾಂತರವಾದರೆ ನಮ್ಮ ಆಕ್ಷೇಪವಿಲ್ಲ.

ಆದರೆ ಒತ್ತಡ, ಆಮಿಷ ಹಾಗು ಬಲವಂತದಿಂದ ಮತಾಂತರ ಮಾಡಿದರೆ ಅದನ್ನು ಸಹಿಸಲಾಗುವುದಿಲ್ಲ. ಇದರಿಂದ ಸಮಾಜದಲ್ಲಿ ವೈಷಮ್ಯ ಸೃಷ್ಟಿಯಾಗುತ್ತದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!