ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ: ನಾಳೆಯಿಂದ ರೇಷನಿಂಗ್ ಮೂಲಕ ನೀರು ಪೂರೈಕೆ
ಮಂಗಳೂರು: ಮಳೆ ಕೊರತೆ ಜೊತೆಗೆ ಬೀರು ಬಿಸಿಲಿಗೆ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಈ ಹಿನ್ನಲೆ ಮಂಗಳೂರು ನಗರದಲ್ಲಿ ಮೇ 5 ರಿಂದ ನೀರಿನ ರೇಷನಿಂಗ್ ಪ್ರಾರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ 05.05.2024 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಮನಪಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





