March 17, 2026

ಕೆರೆ ಮೀನು ತಿಂದು ಇಬ್ಬರು ಮೃತ್ಯು: 15ಕ್ಕೂ ಅಧಿಕ ಮಂದಿ ಅಸ್ವಸ್ಥ

0
image_editor_output_image-905709281-1714789278286

ಕೊಣನೂರು: ಇಲ್ಲಿಗೆ ಸಮೀಪದ ಬಸವನಹಳ್ಳಿಯಲ್ಲಿ ಕೆರೆ ಮೀನು ತಿಂದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ರವಿಕುಮಾರ್ (46) ಹಾಗೂ ಕೆ.ಆರ್. ನಗರ ತಾಲ್ಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತಪಟ್ಟವರು. ಅಲ್ಲದೆ,15 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ನೀರಿಲ್ಲದೇ ಬತ್ತಿದ್ದ ಗ್ರಾಮದ ಕೆರೆ ಕೆಸರಿನಲ್ಲಿದ್ದ ಮೀನುಗಳನ್ನು ಗ್ರಾಮಸ್ಥರು ಹಿಡಿದು ಅಡುಗೆ ಮಾಡಿದ್ದರು. ಬಳಿಕ ಸಂತೋಷದಿಂದ ತಿಂದಿದ್ದಾರೆ.

ಮೀನು ತಿಂದ ಗ್ರಾಮಸ್ಥರಲ್ಲಿ ಹಲವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಎಲ್ಲರನ್ನೂ ಅರಕಲಗೂಡು ಹಾಗೂ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.


ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಗ್ರಾಮಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮೃತರ ಮನೆಗಳಿಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ‌ ನಿಖರ ಕಾರಣ ಕಂಡುಹಿಡಿಯಲಿದ್ದೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!