ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು
ಪುತ್ತೂರು : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.





