ಮಂಗಳೂರು:ಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಈ ಕುರಿತಂತೆ ಎಪ್ರಿಲ್ 28 ರಂದು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿ ಸಫನಾ ಎಂದು ಗುರುತಿಸಲಾಗಿದೆ.