March 17, 2026
H-D-Revanna-DH-1557165590.jpg

ಬೆಂಗಳೂರು: ಲೈಂಗಿಕ ಪ್ರಕರಣ ಮತ್ತು ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಬಂಧಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಐಡಿ ಕಚೇರಿಗೆ ಕರೆತಂದಿದ್ದಾರೆ. ಇವತ್ತು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಬಂಧನ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!